ಟಗರು ಕಾಳಗಕ್ಕೆ ಅನುಮತಿ ನೀಡದ ಜಿಲ್ಲಾಡಳಿತ: ಹಾಲುಮತ ಸಮಾಜದಿಂದ ಪ್ರತಿಭಟನೆ - ಚಿತ್ರದುರ್ಗದಲ್ಲಿ ಟಗರು ಕಾಳಗ
ಚಿತ್ರದುರ್ಗ: ಹಾಲುಮತ ಸಮಾಜದ ಸಂಪ್ರದಾಯಿಕ ಕ್ರೀಡೆಯಾಗಿರುವ ಟಗರು ಕಾಳಗಕ್ಕೆ ಜಿಲ್ಲಾಡಳಿತ ಅನುಮತಿ ನೀಡದ ಕಾರಣ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹಾಲುಮತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರೆಲ್ಲ ಸೇರಿ ಟಗರು ಕಾಳಗಕ್ಕೆ ಅನುಮತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಮಾಡಿದ್ದಾರೆ.