ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
ದಾವಣಗೆರೆ : ಯುಪಿಯ ಹಥ್ರಾಸ್ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟಿಸಲಾಯ್ತು. ನಗರದ ಕೆಇಬಿ ವೃತ್ತದಲ್ಲಿ ಪ್ರತಿಭಟಿಸಿದ ಪ್ರತಿಭಟನಾಕಾರರು, ದಲಿತ ಯುವತಿ ಮೇಲೆ ನಡೆದ ಪೈಶಾಚಿಕ ಕೃತ್ಯದಿಂದ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಕಾಮುಕರಿಗೆ ಕಠಿಣ ಶಿಕ್ಷೆಯಾಗಬೇಕು. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಆರೋಪಿಗಳು ಎಷ್ಟೇ ಬಲಾಢ್ಯರಾಗಿದ್ದರೂ ರಕ್ಷಣೆ ನೀಡದೇ, ಮರದಂಡನೆ ನೀಡಬೇಕು ಎಂದು ಒತ್ತಾಯಿಸಿದರು.