ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತ ಭೇಟಿ ವಿರೋಧಿಸಿ ರಾಯಚೂರಿನಲ್ಲಿ ಪ್ರತಿಭಟನೆ - US President Donald Trump visit to India,
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ವಿರೋಧಿಸಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ಗಾಂಧಿ ಸರ್ಕಲ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಭಾವಚಿತ್ರ ದಹಿಸುವ ಮೂಲಕ ಟ್ರಂಪ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಟ್ರಂಪ್ ಭಾರತ ಭೇಟಿ ಸಮಯದಲ್ಲಿ ಹೈನುಗಾರಿಕೆ, ಕೋಳಿ ಮಾಂಸ ಮತ್ತು ಆಟೋ ಮೊಬೈಲ್ ಒಪ್ಪಂದವಾಗುವ ಸಾಧ್ಯತೆಯಿದೆ. ಇದರಿಂದಾಗಿ ಭಾರತದ ರೈತರು ದಿವಾಳಿಯಾಗಲಿದ್ದು, ಆರ್ಥಿಕ ವ್ಯವಸ್ಥೆ ಮೇಲೆ ಪೆಟ್ಟು ಬೀಳಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.