ಕೊಪ್ಪಳದಲ್ಲೂ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಪ್ರತಿಭಟನೆ: ಆಕ್ರೋಶ - ರಾಜ್ಯ ಸರ್ಕಾರಿ ನೌಕರ
ಕೊಪ್ಪಳ: ಸಾರಿಗೆ ಸಂಸ್ಥೆ ನಿಗಮಗಳ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಕೊಪ್ಪಳ ನಗರದಲ್ಲಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿಯಿಂದ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಒಟ್ಟು ನಾಲ್ಕು ಸಾರಿಗೆ ನಿಗಮಗಳಿವೆ. ನಾಲ್ಕೂ ನಿಗಮಗಳಲ್ಲಿ ಲಕ್ಷಾಂತರ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುತ್ತಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸವಲತ್ತುಗಳು ಯಾವವು ಸಾರಿಗೆ ನಿಗಮಗಳ ನೌಕರರಿಗೆ ಸಿಗುತ್ತಿಲ್ಲ. ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ಸಂಬಳ ಪರಿಷ್ಕರಣೆಯಾಗುತ್ತದೆ. ಆದರೆ ಇದು ಸಾರಿಗೆ ನಿಗಮಗಳ ನೌಕರರಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ನಮ್ಮನ್ನು ಸಹ ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ರು.