ಕೇಂದ್ರದ ಬೆಲೆ ಏರಿಕೆ ನೀತಿ ಖಂಡಿಸಿ ವಿನೂತನ ಪ್ರತಿಭಟನೆ - Center price hike policy
ಧಾರವಾಡ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಹುಬ್ಬಳ್ಳಿ, ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಒಲೆ ಹಾಕಿ, ಉಪಹಾರ ತಯಾರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.