ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಹಿಗ್ಗಾಮುಗ್ಗ ಥಳಿತ... - ರಾಯಚುರು ಸುದ್ದಿ
ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಥಳಿಸಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗರಾಳ ಸಂತೆ ಬಜಾರ್ನಲ್ಲಿ ಜರುಗಿದೆ. ಈಶ್ವರಯ್ಯ ಥಳಿತಕ್ಕೆ ಒಳಗಾದ ಯುವಕನೆಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಹೈಸ್ಕೂಲ್ ಮಕ್ಕಳು ಪರೀಕ್ಷೆ ಬರೆಯುವ ಪ್ಯಾಡ್ ವಿಚಾರಕ್ಕೆ ಜಗಳವಾಡುತ್ತಿದ್ದರು. ಈ ವೇಳೆ ಜಗಳವನ್ನ ಬಗೆಹರಿಸಲು ಈಶ್ವರಯ್ಯ ಮುಂದಾಗಿದ್ದಾನೆ ಎನ್ನಲಾಗಿದೆ. ಈತನ ಮೇಲೆಯೇ ಕೆಲ ಗ್ರಾಮಸ್ಥರು ಆಕ್ರೋಶಗೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸುದ್ದಿ ತಿಳಿದ ಪೊಲೀಸರು ಗ್ರಾಮಕ್ಕೆ ಆಗಮಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.