ಅದ್ಧೂರಿಯಾಗಿ ನಡೆದ ಹಾವೇರಿಯ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ
ಹಾವೇರಿ: ಜಿಲ್ಲೆಯಾದ್ಯಂತ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಜೊತೆಗೆ ಹಾವೇರಿ ನಗರದ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಜಾತ್ರೆಯ ಅಂಗವಾಗಿ ನಡೆದ ರಥೋತ್ಸವಕ್ಕೆ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳು ಚಾಲನೆ ನೀಡಿದರು. ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ರಥೋತ್ಸವ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಕಳೆದ ವರ್ಷ ಕೊರೊನಾ ಲಾಕ್ಡೌನ್ನಿಂದ ಜಾತ್ರೆ ರದ್ದಾಗಿತ್ತು. ಈ ವರ್ಷ ರಥೋತ್ಸವಕ್ಕೆ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಜಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿತ್ತು. ನಗರದ ಅಕ್ಕಮಹಾದೇವಿ ದೇವಸ್ಥಾನದವರೆಗೆ ಸಾಗಿದ ರಥೋತ್ಸವ ನಂತರ ದೇವಸ್ಥಾನಕ್ಕೆ ಮರಳಿತು.