ಪುತ್ತೂರು: ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಲು ಬೀದಿ ನಾಟಕ ಪ್ರದರ್ಶನ - street theater show in putturu
ಪುತ್ತೂರು ನಗರದ ಬಸ್ ನಿಲ್ದಾಣದ ಬಳಿಯ ಗಾಂಧೀ ಕಟ್ಟೆಯ ಮುಂಭಾಗದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ರಸ್ತೆ ಸುರಕ್ಷತಾ ಬೀದಿ ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಗಾನ ಪಿ. ಕುಮಾರ್ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ರಸ್ತೆ ನಿಯಮವನ್ನು ಪಾಲಿಸುವ ಮೂಲಕ ಜೀವಾಪಾಯಗಳಿಂದ ರಕ್ಷಣೆ ಪಡೆಯಲು ಸಾಧ್ಯ. ಬೈಕ್‌ನಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸಿ, ಕಾರು ಇನ್ನಿತರ ವಾಹನಗಳನ್ನು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಿಕೊಳ್ಳಲು ಮರೆಯಬಾರದು ಎಂದು ಸಲಹೆ ನೀಡಿದರು.