ಕರ್ನಾಟಕ

karnataka

ಯಲಹಂಕ : ಗಾಂಜಾ ಮತ್ತಲ್ಲಿ ಯುವಕರ ನಡುವೆ ಫೈಟ್​​​.. ವಿಡಿಯೋ

By

Published : Feb 6, 2022, 9:57 PM IST

ಯಲಹಂಕ ಮುಖ್ಯ ರಸ್ತೆಯಲ್ಲಿ ಜನರ ದಟ್ಟಣೆಯ ನಡುವೆಯೇ ಯುವಕರಿಬ್ಬರು ಗಾಂಜಾ ನಶೆಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯ ಮುಖ್ಯ ರಸ್ತೆಯಲ್ಲಿ ಇಂದು ಮಧ್ಯಾಹ್ನದ ಸಮಯದಲ್ಲಿ ಗಾಂಜಾ ನಶೆಯಲ್ಲಿದ್ದ ಯುವಕರು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ದೃಶ್ಯ ಸೆರೆ ಹಿಡಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಪೊಲೀಸ್ ಗ್ರೂಪ್​​ಗೂ ಈ ವಿಡಿಯೋ ಶೇರ್​ ಆಗಿದೆ. ಆದರೆ, ಈವರೆಗೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ABOUT THE AUTHOR

...view details