ಹುಬ್ಬಳ್ಳಿಯಲ್ಲಿ ಶಾಂತಿಯುತ ವಾತಾವರಣ: ಎಲ್ಲೆಡೆ ಪೊಲೀಸ್ ಕಣ್ಗಾವಲು - ಪೌರತ್ವ ಮಸೂದೆ ವಿರೋಧಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಎರಡನೇ ದಿನವೂ ಮುಂದುವರೆದ ನಿಷೇಧಾಜ್ಞೆ ಜಾರಿಯಲ್ಲಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಗೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಎರಡನೇ ದಿನವಾದ ಇಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಜನಜೀವನ ಹಾಗೂ ಸಂಚಾರ ವ್ಯವಸ್ಥೆ ಯಥಾಸ್ಥಿತಿ ಮುಂದುವರೆದಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಎಲ್ಲೆಡೆ ಪೊಲೀಸ್ ಕಣ್ಗಾವಲು ಕಾಣುತ್ತಿದೆ.