ಬೆಂಗಳೂರಿನಲ್ಲಿ ಮುಂದುವರೆದ ತುಂತುರು ಮಳೆ; ರೈತರ ಪ್ರತಿಭಟನೆಗೆ ಅಡ್ಡಿ - ಭಾರತ್ ಬಂದ್ ನ್ಯೂಸ್
ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿಯಿಂದಲೂ ತುಂತುರು ಮಳೆಯಾಗುತ್ತಿದ್ದು, ಇಂದು ಮುಂಜಾನೆಯೂ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯಿಂದ ರಾಜಧಾನಿ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಡಿ.10ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ತಡರಾತ್ರಿಯಿಂದ ಬಿಟ್ಟೂ ಬಿಡದೆ ತುಂತುರು ಮಳೆಯಗುತ್ತಿದೆ. ರೈತ ಸಂಘಟನೆಗಳ ಪ್ರತಿಭಟನೆಗೆ, ಅವರಿಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.