ಬೆಳಗಾವಿ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದ ಜಿಟಿಜಿಟಿ ಮಳೆ.. - Latest Belagavi district news
ಇಂದು ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಬೀಳುತ್ತಿದೆ. ಕಳೆದ ಐದು ದಿನಗಳಿಂದ ಕುಂದಾನಗರಿಯಲ್ಲಿ ಬಿಡುವು ಕೊಟ್ಟಿದ್ದ ಮುಂಗಾರು ಮಳೆ ಕೊರೊನಾ ಸೋಂಕಿನ ಬಿಸಿಯ ನಡುವೆ ಎಲ್ಲೆಲ್ಲೂ ತಂಪು ಹವೆ ಬೀಸುತ್ತಿದೆ. ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಇರುವುದರಿಂದ ಕೆಲವೆಡೆ ಇನ್ನೂ ಜಿಟಿಜಿಟಿ ಮಳೆ ಆಗುತ್ತಿದೆ. ಇದರಿಂದ ನಗರ ಸೇರಿ ಜಿಲ್ಲೆಯಾದ್ಯಂತ ವಾತಾವರಣ ತಂಪೇರಿದೆ. ಮುಂಗಾರು ರಾಜ್ಯವನ್ನು ಪ್ರವೇಶಿಸಿದ ಖುಷಿಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾಗಿ ಈಗ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.