ರಾಜೀವ್ ಗಾಂಧಿ-ದೇವರಾಜ ಅರಸು ಜನ್ಮದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ - Shimoga news
ಶಿವಮೊಗ್ಗ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗಿಡ ಬೆಳೆಸಿ, ಜೀವ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನಗರದ ಹೊಸಮನೆ ಬಡಾವಣೆಯ ಮಲೆ ಮಹದೇಶ್ವರ ದೇವಸ್ಥಾನ ಬಳಿಯ ಚಾನಲ್ ಏರಿಯಾದಲ್ಲಿ ಗಿಡ ನೆಡುವ ಮೂಲಕ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.