ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ: ರಾಕೇಶ್ ಟಿಕಾಯತ್ - ಧಾರವಾಡದಲ್ಲಿ ರೈತ ಹೋರಾಟ
ಧಾರವಾಡ : ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು. ನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ. ಜೊತೆಗೆ ರಾಷ್ಟ್ರವ್ಯಾಪಿಯೂ ಪ್ರತಿಭಟನೆ ನಡೆಯುತ್ತಿದೆ. ಆದರೂ ಕೇಂದ್ರ ಸರ್ಕಾರ ಸುಮ್ಮನಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರು ಮಾತ್ರ ಧೃತಿಗೆಡದೆ ಪ್ರತಿಭಟನೆ ಮುಂದುವರೆಸಬೇಕೆಂದು ಮನವಿ ಮಾಡಿಕೊಂಡರು.