ಪಾರಿವಾಳಗಳಿಗೆ ಆಹಾರ ಹಾಕುವ ಮೂಲಕ ಸುಷ್ಮಾ ಸ್ವರಾಜ್ ನಿಧನಕ್ಕೆ ರಾಮದಾಸ್ ಸಂತಾಪ - ಮೈಸೂರು
ಮೈಸೂರು: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನದ ಹಿನ್ನೆಲೆ ಶಾಸಕ ರಾಮದಾಸ್ ವಿಶಿಷ್ಟ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ. ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ರಾಮದಾಸ್, ಕೋಟೆ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಶಾಂತಿ ಸಂದೇಶದ ಸೂಚಕವಾದ ಪಾರಿವಾಳಗಳಿಗೆ ಆಹಾರ ಹಾಕುವ ಮೂಲಕ ಸುಷ್ಮಾ ಸ್ವರಾಜ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿದರು.