ಸಿಡಿ ಪ್ರಕರಣದಿಂದ ಉಪಚುನಾವಣೆಗೆ ತೊಂದರೆಯಾಗಲ್ಲ: ಸಚಿವ ಶ್ರೀಮಂತ ಪಾಟೀಲ್ - belagavi by election
ಚಿಕ್ಕೋಡಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದ ಬೆಳಗಾವಿ ಉಪಚುನಾವಣೆಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ಅದು ವೈಯಕ್ತಿಕ ಆಗಿರುವುದರಿಂದ ಪಕ್ಷಕ್ಕೆ ಸಂಬಂಧ ಇರಲ್ಲ. ಹಾಗಾಗಿ ಉಪಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಜವಳಿ ಮತ್ತು ಅಲ್ಪಸಂಖ್ಯಾತ ಖಾತೆ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಕಾಗವಾಡ ತಾಲೂಕಿನಲ್ಲಿ ವಿವಿಧ ಕಾಮಗಾರಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದಾರೆ ಎಂಬುದು ಹೇಳಲಿಕ್ಕೆ ಬರುವುದಿಲ್ಲ. ಅದು ತನಿಖೆಯಿಂದ ಗೊತ್ತಾಗುತ್ತದೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಿಎಂ ಯಡಿಯೂರಪ್ಪ ಪಕ್ಷದ ಅಧ್ಯಕ್ಷರು ಹಾಗೂ ವಿವಿಧ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ ಎಂದು ಶ್ರೀಮಂತ ಪಾಟೀಲ್ ತಿಳಿಸಿದರು.