ಹೈಕಮಾಂಡ್ ಹೇಳಿದ್ರೆ ಬೆಳಗಾವಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧ: ಸತೀಶ್ ಜಾರಕಿಹೊಳಿ - ಸತೀಶ್ ಜಾರಕಿಹೊಳಿ ಲೇಟೆಸ್ಟ್ ನ್ಯೂಸ್
ಬೆಂಗಳೂರು: ಹೈಕಮಾಂಡ್ ಹೇಳಿದ್ರೆ ಬೆಳಗಾವಿ ಲೋಕಸಭೆ ಉಪ ಸಮರದಲ್ಲಿ ಸ್ಪರ್ಧೆಗೆ ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೂರ್ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆ. ಇದರಲ್ಲಿ ನಾನು ಒಬ್ಬನಾಗಿದ್ದೇನೆ. ಈ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಎರಡ್ಮೂರು ದಿನದಲ್ಲಿ ಎಲ್ಲಾ ಗೊತ್ತಾಗುತ್ತದೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ ಮಾಡುತ್ತೇವೆ. ಹೈಕಮಾಂಡ್ ನಿರ್ಧಾರ ಮಾಡಲಿದೆ. ನನ್ನ ಹೆಸರು ಸೇರಿದಂತೆ ಹಲವರ ಹೆಸರು ಕೇಳಿ ಬರ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಎಂದರು.
Last Updated : Mar 18, 2021, 1:31 PM IST