ಸಂತ್ರಸ್ತರಿಗಾಗಿ ನಿಧಿ ಸಂಗ್ರಹಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ - ಶಾಸಕ ಎಂಪಿ ರೇಣುಕಾಚಾರ್ಯ
ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ಸಹಾಯಕ್ಕಾಗಿ ಶಾಸಕ ಎಂ ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡಲಾಯಿತು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಶಾಸಕ ಎಂ ಪಿ ರೇಣುಕಾಚಾರ್ಯ ಸ್ವತಃ ಡಬ್ಬಿ ಹಿಡಿದು ಪ್ರತಿ ಮನೆಗಳಿಗೂ ತೆರಳಿ ನಿಧಿ ಸಂಗ್ರಹಿಸಿದರು.