ಬಿಜೆಪಿಯಲ್ಲಿ ಯಾವುದೇ ಬಂಡಾಯ ನಡೆದಿಲ್ಲ: ರೇಣುಕಾಚಾರ್ಯ ಸ್ಪಷ್ಟನೆ - ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಎದ್ದಿದೆ ಎನ್ನಲಾದ ಭಿನ್ನಮತ ಕುರಿತಂತೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದಲ್ಲಿ ಯಾವುದೇ ರೀತಿಯ ಬಂಡಾಯ ನಡೆದಿಲ್ಲ. ಸರ್ಕಾರ ಗಟ್ಟಿಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಷ್ಟು ದಿನಗಳ ಕಾಲ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಾರೆ. ಯಾರೂ ಕೂಡ ಬಂಡಾಯ ಎದ್ದಿಲ್ಲ. ಎಲ್ಲರೂ ಜೊತೆಗಿದ್ದೇವೆ ಎಂದು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.