ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಬೇಕು: ಸಚಿವ ಸಿ.ಪಿ.ಯೋಗೇಶ್ವರ್ - ramnagara news
ರಾಮನಗರ: ಜಾತಿ ಮೀಸಲಾತಿಗಿಂತ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಬೇಕು ಅಂತಾ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ಮೀಸಲಾತಿ ಹೋರಾಟ ಮಾಡುತ್ತಿರುವ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಮುಂದಿನ ದಿನಗಳಲ್ಲಿ ಜಾತಿವಾರು ಮೀಸಲಾತಿ ಬದಲಾಗಿ, ಆರ್ಥಿಕ ಸ್ಥಿತಿಗತಿ ಆಧಾರದ ಮೇಲೆ ಮೀಸಲಾತಿ ನಿಗದಿ ಆಗಬೇಕು ಎಂದರು. ಚನ್ನಪಟ್ಟಣ ನನ್ನ ಕಾರ್ಯ ಕ್ಷೇತ್ರ. ಚನ್ನಪಟ್ಟಣ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ವರ್ಧೆ ಮಾಡುತ್ತೇನೆ. ನಾನು ಹುಣಸೂರು ಕ್ಷೇತ್ರಕ್ಕೆ ಹೋಗಲ್ಲ. ಬಿಜೆಪಿ ಪಕ್ಷದಿಂದಲೇ ಸ್ಪರ್ಧೆ ಮಾಡ್ತೇನೆ ಅಂತಾ ಉಹಾಪೋಹಗಳಿಗೆ ತೆರೆ ಎಳೆದರು.