20 ವರ್ಷ ದೇಶ ಸೇವೆ ಸಲ್ಲಿಸಿ ಗ್ರಾಮಕ್ಕೆ ಮರಳಿದ ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ - ಹಾವೇರಿಯಲ್ಲಿ ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
ಹಾವೇರಿ: 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ನಿವೃತ್ತ ಯೋಧನಿಗೆ ಸವಣೂರು ತಾಲೂಕಿನ ಯಲವಗಿ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು. ಗ್ರಾಮದ ನಾಗರಾಜ ನಾಗಪ್ಪನವರ ಊರಿಗೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ನಿವೃತ್ತ ಯೋಧನ ಜೊತೆ ಸಂಭ್ರಮಿಸಿದರು. ನಿವೃತ್ತ ಯೋಧನ ಕುಟುಂಬಸ್ಥರು ಹಾಗೂ ಗ್ರಾಮದ ಜನರು ನಾಗರಾಜ ಸೇನೆಯಲ್ಲಿ ಸಲ್ಲಿಸಿದ ಸೇವೆಯ ಬಗ್ಗೆ ಶ್ಲಾಘಿಸಿದರು.