ಹಾವೇರಿ: ನಿವೃತ್ತಿಯಾಗಿ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ - ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೆರೂರು ಗ್ರಾಮ
ಭಾರತೀಯ ಸೇನೆಯಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ನಂತರ ಊರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದರು. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೆರೂರು ಗ್ರಾಮದ ನಿವೃತ್ತ ಯೋಧ ಮಹೇಶ ಬಣಕಾರ, ಹದಿನೇಳು ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ನಿವೃತ್ತರಾಗಿ ಇಂದು ಊರಿಗೆ ಮರಳಿದರು. ಹೀಗಾಗಿ ಗ್ರಾಮದ ಜನರು ಹಾಗೂ ಕುಟುಂಬಸ್ಥರು ನಿವೃತ್ತ ಯೋಧನಿಗೆ ತೆರೆದ ವಾಹನದಲ್ಲಿ ಗ್ರಾಮದ ತುಂಬಾ ಮೆರವಣಿಗೆ ಮಾಡಿದರು.