ಪ್ರತಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದಿದೆ ಕೈ ನಾಯಕರಲ್ಲಿ ಪೈಪೋಟಿ - ಈಶ್ವರ್ ಖಂಡ್ರೆ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಈಗ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಏರಲು ವಿವಿಧ ನಾಯಕರು ತೀವ್ರ ಪೈಪೋಟಿ ನಡೆಸಿದ್ದಾರೆ. ಅಧಿಕಾರ ಹಿಡಿಯುವ ರೇಸ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಿ ಕೆ ಶಿವಕುಮಾರ್ ಹಾಗೂ ಎಚ್ ಕೆ ಪಾಟೀಲ್ ಸೇರಿದಂತೆ ಹಲವು ನಾಯಕರು ಪೈಪೋಟಿಯಲ್ಲಿದ್ದು, ಇವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೂಡ ತಮ್ಮದೇ ಆದ ಪ್ರಯತ್ನದಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ಪಾಲಿಗೆ ಪ್ರತಿಪಕ್ಷ ನಾಯಕ ಸ್ಥಾನ ಹಾಗೂ ಈಶ್ವರ್ ಖಂಡ್ರೆ ಗೆ ಕೆಪಿಸಿಸಿ ಅಧ್ಯಕ್ಷಗಾದಿ ಒಲಿಯುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.