ರಾಜ್ಯ ಸಚಿವರ ಸಿಡಿ ಪ್ರಕರಣ: RTI ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು? - ರಾಜ್ಯ ಸಚಿವರ ಸಿಡಿ ಪ್ರಕರಣ ಸುದ್ದಿ
ಬೆಂಗಳೂರು: ರಾಜ್ಯ ಸಚಿವರೊಬ್ಬರು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಗಂಭೀರ ಆರೋಪ ಎದುರಿಸುತ್ತಿದ್ದು, ಇದೀಗ ಸಂತ್ರಸ್ತ ಮಹಿಳೆಯ ಪರವಾಗಿ ಆರ್ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ನಗರ ಪೊಲೀಸ್ ಕಮೀಷನರ್ ಕಚೇರಿಗೆ ಆಗಮಿಸಿ ದೂರು ನೀಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಯುವತಿಗೆ ಜೀವ ಬೆದರಿಕೆ ಇರುವುದರಿಂದ ಹೊರಗಡೆ ಬರಲು ಸಾಧ್ಯವಾಗುತ್ತಿಲ್ಲ. ನೀವೇ ದೂರು ನೀಡಿ ಎಂದು ಮನವಿ ಮಾಡಿದ್ದರಿಂದ ನಾನು ಇಲ್ಲಿಗೆ ಬಂದಿದ್ದೇನೆ. ಜತೆಗೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಈ ವಿಷಯವನ್ನು ತಮ್ಮ ಗಮನಕ್ಕೆ ತಂದರು. ಇದಾದ ಬಳಿಕ ನಮ್ಮ ವಕೀಲರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ದೂರು ದಾಖಲು ಮಾಡಲು ಬಂದಿದ್ದೇನೆ ಎಂದರು.