ರನ್ ವಿತ್ ಪೊಲೀಸ್: ದಾವಣಗೆರೆಯಲ್ಲಿ ಮ್ಯಾರಥಾನ್ ಸ್ಪರ್ಧೆ - ಪೊಲೀಸ್ ಇಲಾಖೆಯಿಂದ ಮ್ಯಾರಥಾನ್ ಸ್ಪರ್ಧೆ
ದಾವಣಗೆರೆ: ಜಿಲ್ಲಾ ಪೊಲೀಸ್ ಇಲಾಖೆಯಿಂದ 'ರನ್ ವಿತ್ ಪೊಲೀಸ್' ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ನಗರದ ಜಯದೇವ ವೃತ್ತದಿಂದ ಸುಮಾರು 10 ಕಿ.ಮೀ.ಮ್ಯಾರಥಾನ್ ಓಟದ ಸ್ಪರ್ಧೆಗೆ ಪೂರ್ವ ವಲಯ ಐಜಿಪಿ ರವಿ ಎಸ್ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ಚಾಲನೆ ನೀಡಿ ಓಟದಲ್ಲಿ ಭಾಗಿಯಾದರು. ಪೊಲೀಸ್ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಕೂಡ ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದು, ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆ ಆಯೋಜಿಸಲಾಗಿತ್ತು. ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಾರ್ವಜನಿಕರೊಂದಿಗೆ ಈ ಮ್ಯಾರಥಾನ್ ಓಟದ ಸ್ಪರ್ಧೆ ಆಯೋಜಿಸಲಾಗಿದ್ದು, ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.