ಕೊರೋನಾ ಭೀತಿ: ಧಾರವಾಡ ಜಿಲ್ಲಾ ಪಂಚಾಯತ್ ಕಚೇರಿ ಸ್ಯಾನಿಟೈಸ್ - Sanitizer sprayer for ZP Office
ಧಾರವಾಡ ಜಿಲ್ಲಾ ಪಂಚಾಯತ್ನಲ್ಲಿ ಕೊರೊನಾ ಭೀತಿ ಹಿನ್ನೆಲೆ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತ್ ಕೊಠಡಿ ಮತ್ತು ಆವರಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ ಎನ್ನಲಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪಕ್ಕದಲ್ಲಿ ಇರುವ ಜಿಲ್ಲಾ ಪಂಚಾಯತ್ ಆವರಣ, ಸಿಬ್ಬಂದಿಯ ಕೊಠಡಿ ಸೇರಿ ಎಲ್ಲಾ ಕಡೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.