ಮಕ್ಕಳನ್ನು ಮೆರವಣಿಗೆ ಮೂಲಕ ಬರಮಾಡಿಕೊಂಡ ಶಾಲಾ ಆಡಳಿತ ಮಂಡಳಿ - kaapu talik
ರಾಜ್ಯದಾದ್ಯಂತ ಇಂದಿನಿಂದ ಶಾಲೆ ಆರಂಭವಾಗಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ ಮಕ್ಕಳನ್ನು ಮೆರವಣಿಗೆ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ವಾದ್ಯ, ನಗಾರಿ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿ ತರಗತಿಯೊಳಗೆ ಕಳುಹಿಸಲಾಯಿತು. ಹಳೆ ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಸೇರಿ ಮಕ್ಕಳನ್ನು ಶಾಲೆಯೊಳಗೆ ಸೇರಿಸಿಕೊಂಡರು.