ಗಾಂಧಿ ಹುತಾತ್ಮ ದಿನದ ನಿಮಿತ್ತ ಮೈಸೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ - ಮೈಸೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ
ಮೈಸೂರು: ಮಹಾತ್ಮ ಗಾಂಧೀಜಿ ಹುತಾತ್ಮ ದಿನ ಪ್ರಯುಕ್ತ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪ್ರತಿಭಟನೆ ನಡೆಸಿತು. ನಗರದ ಗಾಂಧಿವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು 'ಗಾಂಧಿಯ ಹಂತಕರು ದೇಶದ ಹಂತಕರು' ಎಂಬ ಘೋಷಣೆ ಕೂಗಿ ಆರ್ಎಸ್ಎಸ್, ಬಜರಂಗದಳ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದು. ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ಮಜೀದ್ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.