ಬೆಂಗಳೂರಿನಲ್ಲಿ ಖಾಕಿ ಪಡೆ ಗಸ್ತು: ಗುಂಪು ಸೇರಿದ್ರೆ ಬೀಳುತ್ತೆ ಲಾಠಿ ಏಟು - ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಸದ್ಯ ಬೆಂಗಳೂರಿನಾದ್ಯಂತ ಖಾಕಿ ಪಡೆ ಗಸ್ತು ತಿರುಗುತ್ತಿದ್ದು, ಜನರು ಗುಂಪು ಸೇರುವುದು ಕಂಡು ಬಂದರೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ವಾಕ್ ತ್ರೂ ಮೂಲಕ ಗ್ರೌಂಡ್ ರಿಪೋರ್ಟ್ ಕೊಟ್ಟಿದ್ದಾರೆ.