ವಿಟ್ಲ ಠಾಣೆಯಲ್ಲಿ ಹೋಮ್ ಗಾರ್ಡ್ಗೆ ಸೀಮಂತ ಕಾರ್ಯ - ವಿಟ್ಲ ಪೊಲೀಸ್ ಠಾಣೆಯಲ್ಲಿ ಸೀಮಂತ ಕಾರ್ಯಕ್ರಮ
ಮಂಗಳೂರು:ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಸುದ್ದಿಗಳಿರುತ್ತದೆ. ಆದರೆ, ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೀಮಂತದ ಸಡಗರ ಕಂಡು ಬಂತು. ಇಂದು ಮಧ್ಯಾಹ್ನ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷದಿಂದ ಹೋಮ್ ಗಾರ್ಡ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಲ್ಲಿಕಾ ಅವರು, ತುಂಬು ಗರ್ಭಿಣಿಯಾಗಿದ್ದು ಅವರಿಗೆ ಪೊಲೀಸ್ ಸಿಬ್ಬಂದಿ ಸೀಮಂತ ಕಾರ್ಯ ನೆರವೇರಿಸಿದರು.