ಕಪ್ಪಯ್ಯ ತೋಟದ ಸರ್ಕಾರಿ ಶಾಲೆಯಲ್ಲಿ ಅದ್ಧೂರಿ ಬೀಳ್ಕೊಡುಗೆ ಸಮಾರಂಭ - school send off party
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಕಪ್ಪಯ್ಯ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಳ್ಕೊಡುಗೆ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದಪ್ಪ ಮುದಕನ್ನವರ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಹಲವಾರು ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Last Updated : Mar 15, 2020, 11:37 PM IST