ನೋಂದಣಿಗೆ ತಾಂತ್ರಿಕ ಸಮಸ್ಯೆ: ಕೋವಿಡ್ ವ್ಯಾಕ್ಸಿನ್ ವಿತರಣೆ ಬಗ್ಗೆ ಹಿರಿಯ ನಾಗರಿಕರ ಆಕ್ರೋಶ - ಕೆ.ಸಿ ಜನರಲ್ ಆಸ್ಪತ್ರೆ
ಬೆಂಗಳೂರು: ಇಂದಿನಿಂದ ಮೂರನೇ ಹಂತದ ವ್ಯಾಕ್ಸಿನ್ ಹಂಚಿಕೆಗೆ 60 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಹಾಗೂ ಆರೋಗ್ಯ ಸಮಸ್ಯೆಯಿರುವ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಬೆಳಗ್ಗೆ 9 ಗಂಟೆಯಿಂದ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಆದರೆ, ನೋಂದಣಿ ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲೂ ನೋಂದಣಿ ಮಾಡಿಕೊಳ್ಳಲು ಆಗುತ್ತಿಲ್ಲ. ನಗರದಲ್ಲಿ 24 ಲಸಿಕಾ ಕೇಂದ್ರಗಳಿದ್ದು, ಎಲ್ಲಿಯೂ ಪೂರ್ವ ಸಿದ್ಧತೆ ನಡೆದಿಲ್ಲ. ಹೀಗಾಗಿ ಬೆಳಗ್ಗೆ 9 ಗಂಟೆಯಿಂದಲೇ ಕಾದು ಕುಳಿತಿರುವ ಹಿರಿಯ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಯಲಹಂಕ ಕಡೆಯಿಂದ ಹಿರಿಯ ನಾಗರಿಕರು ಬರುತ್ತಿದ್ದಾರೆ. ಆದರೆ, ಹನ್ನೆರಡು ಗಂಟೆಯವರೆಗೆ ಕಾಯಿರಿ ಎಂದು ಹೇಳಿದ್ದಾರೆ. ಬುಧವಾರದಿಂದ ಬನ್ನಿ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಸಿಬ್ಬಂದಿ ಹೇಳಿ ಕಳಿಸಿದ್ದಾರೆ. ನಗರದ ಕೆ.ಸಿ ಜನರಲ್ ನ ವ್ಯಾಕ್ಸಿನ್ ನೋಂದಣಿ ಕೇಂದ್ರದ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.