ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ತುಮಕೂರು, ಬಾಗಲಕೋಟೆಯಲ್ಲಿ ಪ್ರತಿಭಟನೆ - ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ
ತುಮಕೂರು/ಬಾಗಲಕೋಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಬಾಗಲಕೋಟೆ ಹಾಗೂ ತುಮಕೂರಿನ ಅಂಜುಮನ್ ಎ ಇಸ್ಲಾಂ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಐಎಂಐಎಂ, ಟಿಪ್ಪು ಸುಲ್ತಾನ್ ಸಮಿತಿ, ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ತುಮಕೂರಿನಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ಈ ಕಾಯ್ದೆಗೆ ವಿರೋಧ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು. ವಿದೇಶಿಗರ ನುಸುಳುವಿಕೆ ತಡೆಯಲು ತಡೆಯುವಲ್ಲಿ ವಿಫಲರಾಗಿರುವ ಸರ್ಕಾರ, ಸಿಎಎ ಕಾಯ್ದೆ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದೆ ಎಂದು ಮಾಜಿ ಜವಳಿ ನಿಗಮದ ಉಪಾಧ್ಯಕ್ಷ ನಜೀರ ಕಂಗನೊಳ್ಳಿ ಬಾಗಲಕೋಟೆಯಲ್ಲಿ ಹೇಳಿದರು.