ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ - SFI Protest News In Haveri
ಹಾವೇರಿ : ದ್ವಿತೀಯ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸುವಂತೆ ಆಗ್ರಹಿಸಿ ಹಾವೇರಿಯಲ್ಲಿ ಎಸ್ಎಫ್ಐ ವತಿಯಿಂದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಮುನ್ಸಿಪಲ್ ಮೈದಾನದಿಂದ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದ ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪದವಿ ತರಗತಿಗಳಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಲ್ಯಾಪ್ಟಾಪ್ ಸಹಕಾರಿಯಾಗಲಿದೆ, ಹಾಗಾಗಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುವಂತೆ ಆಗ್ರಹಿಸಿದರು.