ಹೈವೋಲ್ಟೇಜ್ ಕ್ಷೇತ್ರ ಹೊಸಕೋಟೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಶರತ್ ಬಚ್ಚೇಗೌಡ - ಶರತ್ ಬಚ್ಚೇಗೌಡ ಹೊಸಕೋಟೆ ಭೇಟಿ ಇತ್ತೀಚಿನ ಸುದ್ದಿ
ದೇವನಹಳ್ಳಿ: ಹೈವೋಲ್ಟೇಜ್ ಕ್ಷೇತ್ರ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೆಲುವು ಸಾಧಿಸಿದ್ರೆ ಬಿಜೆಪಿಗೆ ಮರಳುವ ಬಗ್ಗೆ ಕಾರ್ಯಕರ್ತರ ಬಳಿ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳುವುದಾಗಿ ಶರತ್ ಬಚ್ಚೇಗೌಡ ಹೇಳಿದ್ದಾರೆ. ಸಮೀಕ್ಷೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನಮ್ಮ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.