ಕೊರೊನಾ ತಡೆಯಲು ಸರ್ಕಾರ ವಿಫಲ: ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಆರೋಪ.. - Shidlaghatta MLA Muniyappa
ಚಿಕ್ಕಬಳ್ಳಾಪುರ: ಸರ್ಕಾರ ಕೊರೊನಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಶಿಡ್ಲಘಟ್ಟ ಕ್ಷೇತ್ರ ಶಾಸಕ ವಿ. ಮುನಿಯಪ್ಪ ನೇರ ಆರೋಪವನ್ನು ಮಾಡಿದ್ದಾರೆ. ಎನಿಗದಲೆ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ವೇಳೆ 'ಈಟಿವಿ ಭಾರತ' ಜೊತೆ ಮಾತನಾಡಿದ ಅವರು, ಕೊರೊನಾ ಬಂದ ನಂತರ ಸರ್ಕಾರ ಜಾರಿಗೆ ತಂದ ಎಲ್ಲಾ ಕಾರ್ಯಕ್ರಮಗಳು ವಿಫಲವಾಗಿದೆ ಎಂದರು.