ಪೆಟ್ರೋಲ್, ಡೀಸೆಲ್ ದರ ಏರಿಕೆ; ಕೇಂದ್ರದ ವಿರುದ್ಧ ಶಿವಮೊಗ್ಗ ಜನರ ಆಕ್ರೋಶ - ಪೆಟ್ರೋಲ್, ಡೀಸೆಲ್ ಬೆಲೆ
ಶಿವಮೊಗ್ಗ: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುತ್ತಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವ ಮೂಲಕ ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತತ ಹದಿನೈದು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗುತ್ತಿದ್ದು ಜನಸಾಮಾನ್ಯರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಕೂಡಲೇ ದರ ಕಡಿಮೆ ಮಾಡಿ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.