ಶಿರಾ ಉಪಚುನಾವಣೆ: ಜೆಡಿಎಸ್ ತ್ಯಜಿಸಿ ಕೈ-ಕಮಲ ಪಕ್ಷ ಸೇರ್ಪಡೆ - By-Election Latest News
ತುಮಕೂರು: ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಮೂಲ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸ್ಥಳೀಯ ಮುಖಂಡರನ್ನು ಪಕ್ಷದತ್ತ ಸೆಳೆಯಲು ನಿರಂತರ ಪ್ರಯತ್ನ ನಡೆಸುತ್ತಿವೆ. ಅದರಲ್ಲೂ ಸ್ಥಳೀಯ ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವ ಪ್ರಕ್ರಿಯೆಗಳು ನಿತ್ಯ ನಡೆಯುತ್ತಿದ್ದು, ಇದು ಜೆಡಿಎಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.