ಶಿವಕುಮಾರ ಸ್ವಾಮೀಜಿ ಸಂಸ್ಮರಣೋತ್ಸವ: ಭಕ್ತರಿಂದ ದಾಸೋಹ ಕಾರ್ಯಕ್ರಮ - ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ
ತುಮಕೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ ದ್ವಿತೀಯ ಸ್ಮರಣೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಭಕ್ತಿಪೂರ್ವಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇನ್ನೊಂದೆಡೆ ತುಮಕೂರು ನಗರದ ವಿವಿಧೆಡೆ ಶಿವಕುಮಾರ ಸ್ವಾಮೀಜಿ ಅವರ ಭಕ್ತವೃಂದ ಉಚಿತ ದಾಸೋಹ ಕಾರ್ಯಕ್ರಮ ಏರ್ಪಡಿಸಿದ್ದರು. ನಗರದ ಸುಮಾರು ಎಂಟು ಕಡೆ ಭಕ್ತರು ಅಲ್ಲಲ್ಲಿ ಉಚಿತವಾಗಿ ಬೆಳಗ್ಗೆಯಿಂದ ಸಂಜೆವರೆಗೂ ಊಟದ ವ್ಯವಸ್ಥೆ ಮಾಡಿದ್ದರು.