ಸೋನಿಯಾಗೆ ನೀಡಿದ್ದ ಎಸ್ಪಿಜಿ ಭದ್ರತೆ ವಾಪಸ್: ಶಿವಮೊಗ್ಗ ಕಾಂಗ್ರೆಸ್ ಪ್ರತಿಭಟನೆ - Congress protest in Shivamogga
ಶಿವಮೊಗ್ಗ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕುಟುಂಬದವರಿಗೆ ನೀಡಿದ್ದ ಎಸ್ಪಿಜಿ ಭದ್ರತೆ ವಾಪಸ್ ಪಡೆದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕೂಡಲೇ ವಿಶೇಷ ರಕ್ಷಣಾ ಪಡೆಯ ಭದ್ರತೆಯನ್ನು ಮತ್ತೆ ನೀಡಬೇಕು, ಇಲ್ಲವಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇನ್ನು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.
Last Updated : Nov 9, 2019, 5:49 PM IST