ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ ಶಿವಣ್ಣ - ಶಿವಣ್ಣ ಕುಟುಂಬ
ಮೈಸೂರಿನ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ತಮ್ಮ ಪತ್ನಿ, ಇಬ್ಬರು ಮಕ್ಕಳು ಅಳಿಯನ ಜೊತೆ ಮೃಗಾಲಯಕ್ಕೆ ಭೇಟಿ ನೀಡಿದ ಶಿವಣ್ಣ, ಪ್ರಾಣಿಗಳ ವೀಕ್ಷಣೆ ಮಾಡಿದ್ದಾರೆ. ಇನ್ನು ಮೃಗಾಲಯದ ‘ಪಾರ್ವತಿ’ ಆನೆಗೆ ಫಲ ಆಹಾರ ನೀಡಿದರು. ಇದಲ್ಲದೇ ಇಡೀ ಮೃಗಾಲಯ ಸುತ್ತಾಡಿ ಪ್ರಾಣಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.