ಯಲ್ಲಾಪುರದಲ್ಲಿ ಗೆದ್ದು ಬೀಗಿದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ - ಯಲ್ಲಾಪುರ ಉಪ ಚುನಾವಣೆ ಫಲಿತಾಂಶ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಇದರಿಂದ ಕಾಂಗ್ರೆಸ್ನ ಪ್ರಮುಖ ಅಸ್ತ್ರವಾಗಿದ್ದ 'ಅನರ್ಹತೆ'ಯನ್ನು ಜನರು ಸ್ಪಷ್ಟವಾಗಿ ತಿರಸ್ಕರಿಸಿದ್ದು, ಹೆಬ್ಬಾರ್ ಪ್ರಭಾವ ಕ್ಷೇತ್ರದಲ್ಲಿ ಮುಂದುವರೆಯಲಿದೆ.