ಹಾವೇರಿಯಾದ್ಯಂತ ಶಿವರಾತ್ರಿ ಸಂಭ್ರಮ: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಭಕ್ತರು - Shivaratri Celebration
ಹಾವೇರಿ: ಜಿಲ್ಲೆಯಾದ್ಯಂತ ಶಿವರಾತ್ರಿ ಸಂಭ್ರಮ ಮನೆಮಾಡಿದೆ. ಈಶ್ವರ ದೇವಸ್ಥಾನಗಳಲ್ಲಿ ಭಕ್ತರು ಮುಂಜಾನೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಹಾವೇರಿಯ ಬಸವೇಶ್ವರನಗರದಲ್ಲಿರುವ ದ್ವಾದಶಿ ಜ್ಯೋತಿರ್ಲಿಂಗಗಳ ದೇವಸ್ಥಾನದಲ್ಲಿ ಶಿವರಾತ್ರಿಯ ಸಂಭ್ರಮ ಕಳೆಕಟ್ಟಿತ್ತು. ಇಲ್ಲಿ ಭಕ್ತರು ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದರು.