ಬೆಂಗಳೂರಿನ ಪಬ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ - ಹೆಚ್ಎಸ್ಆರ್ ಲೇಔಟ್ನ ಹ್ಯಾಂಗ್ ಓವರ್ ಪಬ್ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ ಹ್ಯಾಂಗ್ ಓವರ್ ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇಂದು ಮಧ್ಯಾಹ್ನ 12.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಮೂರು ಅಗ್ನಿಶಾಮಕ ವಾಹನಗಳು ಅಗ್ನಿ ಆರಿಸುವಲ್ಲಿ ಯಶಸ್ವಿಯಾಗಿವೆ. ಅದೃಷ್ಟವಶಾತ್ ಬೆಂಕಿ ಅವಘಡಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಘಟನೆ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.