ಹಾವೇರಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ - ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೇಹುಲ್ಲಾಳ ಗ್ರಾಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಮೇಣದ ಬತ್ತಿ ಹಚ್ಚಿಕೊಂಡು ಹುತಾತ್ಮ ಯೋಧರ ಭಾವಚಿತ್ರ ಹಿಡಿದುಕೊಂಡು ಮೆರವಣಿಗೆ ನಡೆಸಿದರು. ಈ ವೇಳೆ ಹುತಾತ್ಮ ಯೋಧರ ಪರ ಜೈಕಾರ ಹಾಕುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಇದು ಜನರಲ್ಲಿ ದೇಶಭಕ್ತಿಯನ್ನು ಹೆಚ್ಚಿಸಿತು.