ಅದ್ದೂರಿಯಾಗಿ ನಡೆದ ಕೊಳಲು ಗೋಪಾಲಕೃಷ್ಣ ಸ್ವಾಮಿ ರಥೋತ್ಸವ - Gopalakrishna Swamy Chariot Festival
ಅರಕಲಗೂಡು: ತಾಲ್ಲೂಕಿನ ಕೊಣನೂರು ಪಟ್ಟಣದ ಇತಿಹಾಸ ಪ್ರಸಿದ್ಧ ಕೊಳಲು ಗೋಪಾಲಕೃಷ್ಣ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿತು. ಗುರುವಾರ ಬೆಳಿಗ್ಗೆಯಿಂದಲೇ ದೇವಾಲಯದ ಆವರಣದಲ್ಲಿ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ನಿತ್ಯಹೋಮ, ಕೃಷ್ಣಗಂಧೋತ್ಸವ ಮುಂತಾದ ಪೂಜಾ ಕಾರ್ಯಕ್ರಮಗಳು ನೆರವೇರಿದವು. ರಥ ಸಾಗುವ ದಾರಿಯಲ್ಲಿ ಭಕ್ತರು ಹಣ್ಣುಕಾಯಿ ನೀಡಿ, ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.