ಆಯುಧ ಹಾಗೂ ವಾಹನಗಳಿಗೆ ಕಾರವಾರ ಪೊಲೀಸ್ ಇಲಾಖೆಯಿಂದ ವಿಶೇಷ ಪೂಜೆ - ಆಯುಧ ಪೂಜೆ
ಎಲ್ಲೆಡೆ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಆಯುಧ ಪೂಜಾ ದಿನವಾದ ಇಂದು ಕಾರವಾರದ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯಾದ್ಯಂತ ಆಯುಧ ಹಾಗೂ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಪೊಲೀಸ್ ಇಲಾಖೆಯ ಶಸ್ತ್ರಾಸ್ತ್ರಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಪೂಜೆ ಸಲ್ಲಿಸಿದರು. ಬಳಿಕ ಇಲಾಖೆಯ ವಾಹನಗಳಿಗೂ ಪೂಜೆ ಸಲ್ಲಿಸಲಾಯಿತು. ನಗರದಲ್ಲಿನ ವಿವಿಧ ಸರ್ಕಾರಿ ಇಲಾಖೆ ಹಾಗೂ ಅಂಗಡಿಗಳಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಿ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.