ಕೊರೊನಾ ನಿಯಂತ್ರಣಕ್ಕಾಗಿ ಗಂಗಾವತಿ ರಾಮಮಂದಿರದಲ್ಲಿ ವಿಶೇಷ ಪ್ರಾರ್ಥನೆ - Gangavathi ramamandir
ಗಂಗಾವತಿ: ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬಂದು ಜನರು ಮತ್ತೆ ಮೊದಲಿನಂತೆ ನೆಮ್ಮದಿಯಾಗಿ ಜೀವನ ನಡೆಸಬೇಕೆಂದು ಪ್ರಾರ್ಥಿಸಿ ನಗರದ ರಾಮಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಂಗವಾಗಿ ರಾಮಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಭಾಗವಾಗಿ ಕೊರೊನಾ ನಿಯಂತ್ರಣಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪುರೋಹಿತರು ಸಾಮೂಹಿಕವಾಗಿ ಏಕಕಾಲಕ್ಕೆ ಏಕಕಂಠದಿಂದ ವೇದಮಂತ್ರಗಳ ಘೋಷ ಮಾಡಿದ್ದು, ಇಡೀ ದೇಗುಲದ ಪ್ರಾಂಗಣ ಮಂತ್ರಘೋಷದಿಂದ ಮೊಳಗಿತ್ತು.