ತುಮಕೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ - Tumkur
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರುವ ಹಿನ್ನೆಲೆಯಲ್ಲಿ ತುಮಕೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಗರದಲ್ಲಿರುವ ಶ್ರೀರಾಮನ ದೇವಾಲಯ, ಬಾರ್ಲೈನ್ ರಸ್ತೆಯಲ್ಲಿರುವ ರಾಮನ ದೇವಾಲಯ ಹಾಗೂ ರಾಮನ ಬಂಟ ಹನುಮಂತ ದೇವಾಲಯದಲ್ಲಿ ದೇವರಿಗೆ ಅಭಿಷೇಕ ಮಾಡುವ ಜೊತೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.