ಅಮವಾಸ್ಯೆ : ಶ್ರೀ ವಿರೂಪಾಕ್ಷೇಶ್ವರನ ದರ್ಶನ ಪಡೆಯಲು ಬಂತು ಭಕ್ತರು ದಂಡು - ಮಣ್ಣೆತ್ತಿನ ಅಮವಾಸ್ಯೆ
ಹೊಸಪೇಟೆ(ವಿಜಯನಗರ): ವಿಶ್ವ ವಿಖ್ಯಾತ ಹಂಪಿಗೆ ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ನೂರಾರು ಭಕ್ತರು ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದು ಪುನೀತರಾದರು. ಪಂಪಾಂಬಿಕಾ, ಭುವನೇಶ್ವರಿ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಅಲಂಕಾರವನ್ನು ಮಾಡಲಾಗಿತ್ತು. ಭಕ್ತರು ಸಾಲಿನಲ್ಲಿ ನಿಂತು ಕೋವಿಡ್ ನಿಯಮಗಳೊಂದಿಗೆ ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನು ಮಾಡಿದರು. ದೇವಸ್ಥಾನಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಭಕ್ತರು ಆಗಮಿಸಿದ್ದರು.